ಟಿ20 ವಿಶ್ವಕಪ್ ಟೂರ್ನಿ: ಭಾರತ vs ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್.!

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಎಲ್ಲ ಟಿಕೆಟ್‌ಗಳು ಮಾರಾಟವಾಗಿದೆ. ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವು ಅ. 23 ರಂದು ಮೇಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಪ್ರತಿಷ್ಠಿತ ಟೂರ್ನಿ ಆರಂಭವಾಗುವ ಒಂದು ತಿಂಗಳ ಮುನ್ನವೇ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ತಿಳಿಸಿದೆ. ಈ ಪಂದ್ಯದ ಟಿಕೆಟ್ ಗಳನ್ನು ಒಟ್ಟು 82 ದೇಶಗಳ ಅಭಿಮಾನಿಗಳು ಖರೀದಿಸಿದ್ದಾರೆ.