ಬಸ್ಸಿಗೆ ಬೆಂಕಿ ತಗುಲಿ ಅವಘಡ.! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಗುಜರಾತ್: ಅಹಮದಾಬಾದಿನ ಮೆಮ್‌ನಗರ ಬಸ್ ನಿಲ್ದಾಣದಲ್ಲಿ ಬಸ್‌ಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ. ಇನ್ನು ಘಟನೆಯಲ್ಲಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ದುರ್ಘಟನೆ ಸಂಭವಿಸಿದ ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಕೂಡಲೇ ಸ್ಥಳಾಂತರಿಸಲಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ಸಿಕ್ಕಿದೆ.