ಬೆಂಗಳೂರು ವಿವಿಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಸೆ.​ 26 ಕೊನೆಯ ದಿನ

ಬೆಂಗಳೂರು: ಬೆಂಗಳೂರು ವಿವಿಯಲ್ಲಿ ವಿವಿಧ ವಿಷಯಗಳ ಭೋಧನೆಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಸೆ.​ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.

ವಾಸ್ತು ಶಾಸ್ತ್ರ, ಮೆಕಾನಿಕಲ್​ ಇಂಜಿನಿಯರಿಂಗ್​, ಎಲೆಕ್ಟ್ರಾನಿಕ್ಸ್​​ ಅಂಡ್​ ಕಮ್ಯೂನಿಕೇಷನ್​, ಕಂಪ್ಯೂಟರ್​ ಸೈನ್ಸ್​ ಮತ್ತು ಮಾಹಿತಿ ತಂತ್ರಜ್ಞಾನ, ಸಿವಿಲ್​ ಇಂಜಿನಿಯರಿಂಗ್​ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳನ್ನು ಪ್ರಸಕ್ತ ಸಾಲಿನ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, ಇವು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಕಾಲೇಜಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ.