ಬಿಜೆಪಿ ಜೊತೆ ಅಮರಿಂದರ್ ಸಿಂಗ್ ಪಕ್ಷ ವಿಲೀನ: ಸೆ.19 ರಂದು ಅಧಿಕೃತ ಘೋಷಣೆ ಸಾಧ್ಯತೆ

ಪಂಜಾಬ್‌: ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಬಿಜೆಪಿ ಸೇರಲಿದ್ದು ಹೊಸದಾಗಿ ರಚಿಸಲಾದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಿದ್ಧರಾಗಿದ್ದಾರೆ. ಸೆಪ್ಟೆಂಬರ್ 19 ರಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಮರಿಂದರ್ ಬಿಜೆಪಿ ಸೇರಲಿದ್ದು ಅದೇದಿನ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಸಿಂಗ್ ಅಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. 

ಕಾಂಗ್ರೆಸ್‌ ಪಕ್ಷ ತೊರೆದ ನಂತರ ಅಮರಿಂದರ್ ಪಂಜಾಬ್ ಲೋಕ್‌ ಕಾಂಗ್ರೆಸ್ ಅನ್ನು ಸ್ಥಾಪಿಸಿದ್ದರು. ಆದರೆ, ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ತಮ್ಮ ಪಕ್ಷವನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಲು ತೀರ್ಮಾನ ಮಾಡಿದ್ದರು. ಕೆಲವು ದಿನಗಳ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಬಿಜೆಪಿ ಸೇರಿದ ನಂತರ ಪ್ರಮುಖ ಜವಾಬ್ದಾರಿಯನ್ನು ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಪಕ್ಷದ ಹೈಕಮಾಂಡ್‌ನಿಂದ ಮುಖ್ಯಮಂತ್ರಿಯಾಗಿ ಅನಧಿಕೃತ ನಿರ್ಗಮನದ ನಂತರ ಕಾಂಗ್ರೆಸ್‌ನಿಂದ ಕ್ಯಾಪ್ಟನ್‌ ಬೇರ್ಪಟ್ಟಿದ್ದರು.