ಬೆಂಗಳೂರು: ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಬಿಗ್ ಗಿಫ್ಟ್ ನೀಡಿದ್ದು ಸದ್ಯದಲ್ಲೇ ವೇತನ ಪರಿಷ್ಕರಣ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಮೂಲಕ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ರಾಮುಲು ಸಿಹಿಸುದ್ದಿ ನೀಡಿದ್ದಾರೆ.
ವಿಧಾನಪರಿಷತ್ ಸದಸ್ಯ ಅರುಣ ಮೇಲ್ಮನೆಯಲ್ಲಿ ಮಾತನಾಡಿ, ನಾಲ್ಕು ವರ್ಷದಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಿಲ್ಲ. ಅನೇಕ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ಶ್ರೀರಾಮುಲು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ನಾಲ್ವರು ಎಂಡಿಗಳ ನೇತೃತ್ವದ ಸಮಿತಿಯ ವರದಿ ಬಂದ ನಂತರ ಈ ಬಗ್ಗೆ ನಿರ್ಧರಿಸಲಾಗುವುದು. ಆದಷ್ಟು ಬೇಗ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.