ಇಡಿ ಅನಗತ್ಯ ದಾಳಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ – ಅರವಿಂದ ಕೇಜ್ರಿವಾಲ್

ನವದೆಹಲಿ: ಜಾರಿ ನಿರ್ದೇಶನಾಲಯವು ಅನಗತ್ಯವಾಗಿ ತೊಂದರೆ ಕೊಡುತ್ತಿದೆ. ಇದರಿಂದ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲವೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಪ್ರತಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಕೇಜ್ರಿವಾಲ್, ಬಿಜೆಪಿ ಆರೋಪ ಮಾಡುತ್ತಿರುವ ಅಬಕಾರಿ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ 2021-22 ರಲ್ಲಿ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ ದೇಶದಾದ್ಯಂತ 40 ಸ್ಥಳಗಳಲ್ಲಿ ದಾಳಿ ಮಾಡಿದೆ. ಬಿಜೆಪಿ ನಾಯಕರೊಬ್ಬರು 8000 ಕೋಟಿ ರೂ. ಹಗರಣ ನಡೆದಿದೆ ಎಂದು ಆಪಾದನೆ ಮಾಡಿದ್ದಾರೆ. ಇನ್ನೂ ಲೆಫ್ಟಿನೆಂಟ್ ಗವರ್ನರ್ 144 ಕೋಟಿ ರೂ. ಹಗರಣವಾಗಿದೆ ಎಂದು ಹೇಳುತ್ತಾರೆ. ಸಿಬಿಐ ಎಫ್‌ಐಆರ್‌ನಲ್ಲಿ 1 ಕೋಟಿ ಹಗರಣ ಎಂದು ಉಲ್ಲೇಖವಾಗಿದೆ. ಆದರೆ ನಿಜಕ್ಕೂ ಇದರ ಸತ್ಯತೆ ಏನೆನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.