ದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ 72 ನೇ ವರ್ಷದ ಜನ್ಮದಿನ. ಇದರ ಪ್ರಯುಕ್ತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ತಾವೂ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ. ಅಶ್ವಿನಿ ವೈಷ್ಣವ್ ಅವರು ರೈಲು ನಿಲ್ದಾಣದಲ್ಲಿ ಕಸ ಗುಡಿಸುವ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.