ತೆಲಂಗಾಣ: ’40 ಪರ್ಸೆಂಟ್ ಸರ್ಕಾರ’ ಎಂಬ ಬೋರ್ಡ್ ಗಳು ತೆಲಂಗಾಣದಲ್ಲಿ ರಾರಾಜಿಸುತ್ತಿವೆ. ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಈ ಫ್ಲೆಕ್ಸ್ ಗಳನ್ನ ಅಳವಡಿಸಲಾಗಿದ್ದು ಈ ಕುರಿತು ಸಿಎಂ ಬಸವರಾಜ ಬೊಮ್ಮಯಿ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಫ್ಲೆಕ್ಸ್ ಹಾಕುವುದು ಎಷ್ಟು ಸಮಂಜಸ.? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಆದರೆ ಇಂತಹ ಬೆಳವಣಿಗೆಗಳು ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ತೆಲಂಗಾಣದ ಭ್ರಷ್ಟಾಚಾರವನ್ನು ಕರ್ನಾಟಕದಲ್ಲಿ ಪ್ರಸ್ತಾಪಿಸಿದರೆ ಹೇಗಿರುತ್ತದೆ ಎಂದು ಸಿಎಂ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರಿಗೂ ಎಚ್ಚರಿಕೆ ಕೊಟ್ಟರು. ಹೈದ್ರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಅಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅಪಮಾನಿಸುವ ಬೋರ್ಡ್‌ಗಳನ್ನು ಆಡಳಿತಾರೂಢ ಟಿಆರ್‌ಎಸ್ ಪಕ್ಷ ಅಳವಡಿಸಿದೆ. 40 ಪರ್ಸೆಂಟ್ ಸಿಎಂಗೆ ಸ್ವಾಗತ ಅಂತ ಬ್ಯಾನರ್‌ಗಳನ್ನು ಹಾಕಲಾಗಿದೆ.