ಲಡಾಖ್: ಕಾರ್ಗಿಲ್‌ನಲ್ಲಿ ಸೋಮವಾರ ಬೆಳಗ್ಗೆ 9:30 ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಬೆಳಿಗ್ಗೆ 9:30 ರ ಸುಮಾರಿಗೆ ಕಾರ್ಗಿಲ್‌ನ ವಾಯುವ್ಯದ 151 ಕಿ.ಮೀ. ದೂರದಲ್ಲಿ ಭೂಮಿಯಿಂದ 10 ಕಿಲೋಮೀಟರ್ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಹಿತಿ ನೀಡಿದೆ. ಈವರೆಗೆ ಭೂಕಂಪದಿಂದ ಹಾನಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ.