ಇಡಿ ವಿಚಾರಣೆಗೆ ಹಾಜರಾದ ಡಿಕೆ ಶಿವಕುಮಾರ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ವಿಚಾರಣೆಗೆ ಹಾಜರಾದರು. 

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ 11 ಗಂಟೆ ಸುಮಾರಿಗೆ ಇ.ಡಿ. ಕಚೇರಿಗೆ ಡಿ.ಕೆ.ಶಿವಕುಮಾರ್ ತಲುಪಿದರು.

ಇ.ಡಿ ನೋಟಿಸ್ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್ ನಾನೊಬ್ಬ ರಾಜಕಾರಣಿ, ರೈತ, ಬ್ಯುಸಿನೆಸ್‌ಮೆನ್ ಅಂದಿದ್ದಾರೆ. ನಾನು ಭ್ರಷ್ಟಾಚಾರ ಮಾಡಿಲ್ಲ, ಅದೆಲ್ಲ ಅವರೇ ಹೇಳಿದ್ದಾರೆ. ಅವರು ಭ್ರಷ್ಟಾಚಾರ ಮಾಡದೇ ಇದ್ದಲ್ಲಿ ಇ.ಡಿ ನೋಟಿಸ್ ಕೊಟ್ಟಿದ್ದರೂ, ಅದಕ್ಕೆ ಬಹುಶಃ ಅವರು ಉತ್ತರ ಕೊಡುವ ಸಾಮರ್ಥ್ಯ ಹೊಂದಿದ್ದಾರೆ ಎಂದರು.