ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ವಿಧಾನಪರಿಷತ್ನಲ್ಲಿ ಸದಸ್ಯ ಎಂ.ಕೆ.ಪ್ರಾಣೇಶ್ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಪಟ್ಟಂತೆ ಉತ್ತರ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.