ಸೆ 21 ಬುಧವಾರ ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಕುಮಟಾ/ಹೊನ್ನಾವರ: ಕುಮಟಾ ಉಪಕೇಂದ್ರದ 110 ಕೆ.ವಿ ವಿದ್ಯುತ್ ಮಾರ್ಗದ ನಿರ್ವಹಣೆ ಇರುವುದರಿಂದ ಸೆ 21 (ಬುಧವಾರ) ಕುಮಟಾ, ಹೊನ್ನಾವರ ಹಾಗೂ ಮುರ್ಡೇಶ್ವರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಕುಮಟಾ ತಾಲೂಕಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಹೊನ್ನಾವರ, ಮುರ್ಡೇಶ್ವರ, ಭಟ್ಕಳ ಭಾಗದಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ. 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.