ನವದೆಹಲಿ: ಪಿಎಂ ಕೇರ್ಸ್ ಫಂಡ್ ನ ಟ್ರಸ್ಟಿಯಾಗಿ ರತನ್ ಟಾಟಾ ಹಾಗೂ ಸಲಹಾ ಮಂಡಳಿಗೆ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿಯನ್ನು ನೇಮಕ ಮಾಡಲಾಗಿದೆ. ಪ್ರಧಾನಿ ಮೋದಿ ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಈ ಘೋಷಣೆಯನ್ನು ಮಾಡಲಾಗಿದೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಟ್ರಸ್ಟಿಗಳನ್ನು ಪಿಎಂ ಕೇರ್ಸ್ ಫಂಡ್‌ನ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿದ್ದಾರೆ.
ಇನ್ನು ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾರನ್ನು ಕೂಡ ಪಿಎಂ ಕೇರ್ಸ್ ಫಂಡ್ ನ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.