ಭಟ್ಕಳ: ಅಂತರಾಷ್ಟ್ರೀಯ ಕಡಲತೀರ ಸ್ವಚ್ಚತಾ ಅಂಗವಾಗಿ ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಸ್ಥಳೀಯರು ಎಲ್ಲರು ಸೇರಿ ಗೋರ್ಟೆ ಕಡಲ ತೀರದಲ್ಲಿ ಸ್ವಚ್ಚಗೊಳಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ ಮಾತನಾಡಿ, ಪ್ರತಿಯೊಬ್ಬರೂ ಸ್ವಯಂ ಪ್ರೇರಣೆ ಹಾಗೂ ಕಾಳಜಿಯಿಂದ ಸಮದ್ರ ತೀರಗಳ ಸ್ವಚ್ಛತಾ ಕಾರ್ಯ ಕೈಗೊಂಡು, ಪ್ರಕೃತಿದತ್ತವಾಗಿ ಬಂದಿರುವ ನೈಸರ್ಗಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.
ನಂತರ ಪಿ.ಎಸೈ ಅಣ್ಣಪ್ಪ ಮೊಗೇರ್ ಮಾತನಾಡಿ ಸಮುದ್ರ ತೀರ ಹಾಗೂ ಬೀಚ್‌ಗಳನ್ನು ಸ್ವಚ್ಛವಾಗಿಡಲು ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಮನವಿ ಮಾಡಿದರು. ಕಡಲತೀರದುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್, ಬಟ್ಟೆ, ಬಾಟಲ್, ಬಲೆ ಸೇರಿದಂತೆ ತರಗೆಲೆಯ ತ್ಯಾಜ್ಯವನ್ನು ಒಟ್ಟುಗೂಡಿಸಿ ಬೀಚ್ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು, ಸ್ಥಳಿಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.