ಬೆಂಗಳೂರು: ಕರ್ನಾಟಕದಲ್ಲಿ ನಡೆದ ಎನ್ಐಎ ದಾಳಿ ಧರ್ಮಾಧಾರಿತವಲ್ಲ, ಅಪರಾಧ ಆಧಾರಿತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಖಚಿತ ಮಾಹಿತಿ ಇಟ್ಟುಕೊಂಡೇ ಎನ್ಐಎ ಸಿಬ್ಬಂದಿಗಳು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.