ಬೆಂಗಳೂರು: ಪೌರ ಕಾರ್ಮಿಕರೊಂದಿಗೆ ಸಿಎಂ ಬಸವರಾಜ ಬೊಮ್ಮಯಿ ಇಂದು ಅವರ ನಿವಾಸದಲ್ಲಿ ಉಪಹಾರ ಸೇವಿಸಿದರು. ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಎರಡು ದಿನಗಳ ಹಿಂದೆ ಪೌರ ಕಾರ್ಮಿಕರ ಖಾಯಂ ಮಾಡುವ ತೀರ್ಮಾನವನ್ನು ಸಂಪುಟದಲ್ಲಿ ಚರ್ಚೆ ನಡೆಸಿದ್ದರು. ಇಂದು 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಸಿಸಿ ಪಾಟೀಲ್ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಎನ್. ಮಹೇಶ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.