ಕೇರಳ: ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ಖಂಡಿಸಿ ಕೇರಳ ಬಂದ್ ಗೆ ಕರೆನೀಡಿರುವ ಪಿ ಎಫ್ ಐ ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಪಿಎಫ್ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.
ಕೇರಳದಲ್ಲಿ ಪ್ರತಿಭಟನೆಗೆ ನಿಷೇಧ ಹೇರಲಾಗಿದೆ. ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.