ಭಟ್ಕಳ: ಸುಮಾರು 60 ರಿಂದ 70 ವರ್ಷದ ಅಪರಿಚಿತ ವೃದ್ದರೋರ್ವರು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ
ಮೃತಪಟ್ಟಿರುವ ಘಟನೆ ನಡೆದಿದ್ದು ಯಾರಿಗಾದರೂ ವೃದ್ದರ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ವೃದ್ಧ ವ್ಯಕ್ತಿ ರಸ್ತೆ ಬದಿಯಲ್ಲಿ ಬಿದ್ದಿದ್ದರು. ನಂತರ ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ಮೃತನ ಸಂಬಂಧಿಕರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಭಟ್ಕಳ ನಗರ ಠಾಣೆಯ ಫೋನ್ ನಂಬರ್ 08385 226333 ಸಂಪರ್ಕಿಸಬಹುದು.