ಭಟ್ಕಳ: ತಾಲೂಕಿನ ಬೈಪಾಸ್ ಸಮೀಪ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಿಪ್ಪಿದ್ದು ಮೂವರು ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಉನೈಜ್ ಹಮ್ಜದ ಖತೀಬ್ (20) ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.