‘ಪೇ ಸಿಎಂ’ ಕಾಂಗ್ರೇಸ್ ನ ಡರ್ಟಿ ಪಾಲಿಟಿಕ್ಸ್: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದಿಂದ ನಡೆಸುತ್ತಿರುವ ‘ಪೇ ಸಿಎಂ ಅಭಿಯಾನವೊಂದು ‘ಡರ್ಟಿ ಪಾಲಿಟಿಕ್ಸ್’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿರಿಗೆರೆಯ ತರಳಬಾಳು ಮಠದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30 ನೇ ಶ್ರದ್ಧಾಂಜಲಿ ಸಮಾರಂಭಕ್ಕೆ ಶನಿವಾರ ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

‘ಪೇ ಸಿಎಂ’ ಅಭಿಯಾನದ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದ್ದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಸಂಪೂರ್ಣ ಹತಾಶರಾಗಿದ್ದಾರೆ. ಯಾವುದೇ ವಿಚಾರವನ್ನು ಸರಿಯಾಗಿ ತಿಳಿಯುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವತಯಾರಿ ಇಲ್ಲದೇ ಸದನಕ್ಕೆ ಬರುತ್ತಿದ್ದಾರೆ. ಜನಪರ ಕಾಳಜಿ ಅವರಲ್ಲಿ ಕಾಣುತ್ತಿಲ್ಲ. ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಇದ್ದಾರೆ. ಕರ್ನಾಟಕದಲ್ಲಿ ಇದು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.