ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್. ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರನ್ನು ಏರ್ ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ವಿಠ್ಠಲ್ ಮಲ್ಯ‌ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಶ್ವಾಸ್ವಕೋಶದಲ್ಲಿ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೇ ಎಸ್‌ಎಂಕೆ ಆರೋಗ್ಯದ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ನಿಗಾ ವಹಿಸಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಮಾಹಿತಿ ನೀಡಿದೆ.