ಅಧಿಕಾರಿಗಳ ವರ್ಗಾವಣೆ ಸರ್ಕಾರ ಮಟ್ಟದಲ್ಲಿ ಸರ್ವೇ ಸಾಮಾನ್ಯ – ಕೋಟ ಶ್ರೀನಿವಾಸ ಪೂಜಾರಿ

ಭಟ್ಕಳ: ಅಧಿಕಾರಿಗಳ ವರ್ಗಾವಣೆ ಸರ್ಕಾರ ಮಟ್ಟದಲ್ಲಿ ಸರ್ವೇ ಸಾಮಾನ್ಯ. ಇದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಪವಿಭಾಗಾದಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತಾಲೂಕಿನಲ್ಲಿ ಕಳೆದ ಬಾರಿ ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳಿಗೆ ಸರಕಾರದಿಂದ ಹಣ ಮಂಜೂರಾಗಿ ಅವರ ಖಾತೆಗೆ ಹಣ ಹಾಕಲಾಗಿದೆ. ಈ ಬಾರಿ ನೀರು ಹೋದ ಪ್ರತಿ ಮನೆಗಳಿಗೆ ಈಗಾಗಲೇ 10 ಸಾವಿರ ರೂ. ಪರಿಹಾರ ಒದಗಿಸಲಾಗಿದೆ. ಅಂಗಡಿ ಮುಂಗಟ್ಟುಗಳಿಗೆ ನೀರು ಹೋಗಿ ಅಪಾರ ನಷ್ಟವಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಕೆಲವರಿಗೆ ಕೆಲವು ಕಾರಣಗಳಿಂದ ಪರಿಹಾರ ದೊರಕದೇ ವಿಳಂಬವಾಗಿದ್ದು, ಅದನ್ನು ಕೂಡಲೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಹಲವು ಸಮಸ್ಯೆಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. ಉತ್ತಮ ಆಡಳಿತ ನೀಡುವ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲೆಯ ಜನಪ್ರತಿನಿಧಿಗಳೂ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ತಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಎಂದು ಸಚಿವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಸುನೀಲ್ ನಾಯ್ಕ, ಉಪವಿಭಾಗಾಧಿಕಾರಿ ಮಮತಾದೇವಿ, ತಹಶೀಲ್ದಾರ ಸುಮಂತ ಇದ್ದರು.