ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನದ ಆಚರಣೆ

ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಪ್ರಾಂಶುಪಾಲ ಡಿ.ಎಸ್. ಭಟ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್ ಸ್ವಯಂ ಸೇವಕರು ಸೇವೆಯ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರಾಮಕೃಷ್ಣ ಗೌಡ, ಉಪನ್ಯಾಸಕರಾದ ಶರತ್‌ಕುಮಾರ್, ಭವ್ಯ ಸಿ. ಉಪಸ್ಥಿತರಿದ್ದರು.