ಲಖೀಂಪುರ ಖೇರಿಯಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ದಾರುಣ ಸಾವು

ಉತ್ತರ ಪ್ರದೇಶ: ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು 8 ಮಂದಿ ಬಲಿಯಾದ ಘಟನೆ ಲಖಿಂಪುರ ಖೇರಿಯಲ್ಲಿ ಸಂಭವಿಸಿದೆ. ಇನ್ನು ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಲಖ್ನೋ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.