ನವದೆಹಲಿ: ಕೇಂದ್ರ ಸರ್ಕಾರ ದೇಶದ ಬಡ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಉಚಿತ ಪಡಿತರ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲು ನಿರ್ಧರಿಸಿದೆ. ಈ ಯೋಜನೆ ಸೆ. 30 ರಂದು ಕೊನೆಗೊಳ್ಳುತ್ತಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರವನ್ನು ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲು ಸರ್ಕಾರ ನಿರ್ಧರ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಇದಲ್ಲದೆ ಕೇಂದ್ರಸರ್ಕಾರವು ಕೇಂದ್ರದ ನೌಕರರ ಡಿಎಯನ್ನು ಶೇ. 4 ರಷ್ಟು ಹೆಚ್ಚಿಸಿದೆ.
ಹಣಕಾಸು ಸಚಿವಾಲಯದ ಪ್ರಕಾರ, ಕೇಂದ್ರ ಸರ್ಕಾರವು ಠೇವಣಿ ಇರಿಸಲಾದ 45,000 ಕೋಟಿ ರೂ. ಆಹಾರ ಧಾನ್ಯಗಳ ದಾಸ್ತಾನನ್ನು ಪರಿಶೀಲಿಸಿದ ಬಳಿಕ ಉಚಿತ ಪಡಿತರದ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.