ಬಾಚಣಕಿ ಗ್ರಾಮದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕೀಟ್ ಹೌಸ್ ಲೋಕಾರ್ಪಣೆಗೊಳಿಸಿದ ಸಚಿವ ಸಿಸಿ ಪಾಟೀಲ್

ಮುಂಡಗೋಡ: ಬಾಚಣಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಡಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸರ್ಕ್ಯೂಟ್ ಹೌಸ ಅನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸಿ‌.ಸಿ.ಪಾಟೀಲ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಪ.ಪಂಚಾಯತ ಅಧ್ಯಕ್ಷೆ ಜಯಸುಧಾ ಬೋವಿ, ಉಪಾಧ್ಯಕ್ಷ ಶ್ರೀಕಾಂತ ಸಾನು, ಪಟ್ಟಣ ಪಂಚಾಯತ ಸದಸ್ಯರು, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.