ತಿರುವನಂತಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸಿದ್ದು, 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿದೆ. ಭಾರತದ ದಾಳಿಗೆ ತತ್ತರಿಸಿ 106ರನ್ ಕಲೆಹಾಕಿದ್ದ ದಕ್ಷಿಣ ಆಫ್ರಿಕಾ ಟೀಂ ಇಂಡಿಯಾಗೆ 107ರನ್‌ಗಳ ಗುರಿ ನೀಡಿತ್ತು.
ಈ ಸುಲಭ ಗುರಿಯನ್ನ ಬೆನ್ನತ್ತಿದ ಭಾರತದ ಪರ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಜೊತೆಗೆ ಕೆ.ಎಲ್ ರಾಹುಲ್ ತಾಳ್ಮೆಯ ಆಟದಿಂದಾಗಿ ಟೀಂ ಇಂಡಿಯಾ 16.4 ಓವರ್‌ಗಳಲ್ಲಿಯೇ ಗೆಲುವಿನ ದಡ ತಲುಪಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಸತತ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿ ಗೆದ್ದ ಮೂರು ದಿನಗಳ ನಂತರ ಟೀಂ ಇಂಡಿಯಾ ಹೊಸ ಎದುರಾಳಿಯ ವಿರುದ್ಧವೂ ಗೆದ್ದಿದೆ. ತಿರುವನಂತಪುರಂನಲ್ಲಿ ವೇಗದ ಬೌಲರ್ಗಳ ಸಹಕಾರಿ ಪಿಚ್ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ಬ್ಯಾಟ್ಸ್ಮನ್ಗಳು ಸಂಕಷ್ಟಕ್ಕೆ ಸಿಲುಕಿದರು. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು ಕೇವಲ 106 ರನ್‌ಗಳಿಗೆ ಕಟ್ಟಿಹಾಕಿತು. ಆರಂಭಿಕ ಸಂಕಷ್ಟದ ನಂತರ ಭಾರತ ಈ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು.