ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಎಂಟು ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ನಿವಾಸಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಸುಮಾರು 1 ಗಂಟೆ ಕಾಲ ಡಿಕೆಶಿ ನಿವಾಸದಲ್ಲಿದ್ದು, ನಂತರ ಮನೆ, ಜಮೀನು ಮತ್ತಿತರ ಸ್ಥಳಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಭೇಟಿಯ ವೇಳೆ ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೊಲೀಸರು ಸ್ಥಳದಲ್ಲಿದ್ದರು.