ನವದೆಹಲಿ: ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ಭಾರತದ ನೂತನ ಅಟಾರ್ನಿ ಜನರಲ್ ಆಗಿ ನೇಮಿಸಲಾಗಿದೆ. ಅವರು ಮೂರು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಇರುತ್ತಾರೆ. ಕೆ.ಕೆ.ವೇಣುಗೋಪಾಲ್‌ರಿಂದ ತೆರವಾಗಿದ್ದ ಸ್ಥಾನಕ್ಕೆ ಆರ್.ವೆಂಕಟರಮಣಿಯವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ಮುಕುಲ್ ರೋಹಟಗಿ ಅವರನ್ನು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಕ ಮಾಡಿತ್ತು. ಆದರೆ ಮುಕುಲ್ ರೋಹಟಗಿ ಅವರು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.
ವೆಂಕಟರಮಣಿ ಅವರು ಪ್ರಸ್ತುತ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಅವರ ಅವಧಿಯು 2022ರ ಸೆಪ್ಟೆಂಬರ್ 30ರಂದು ಕೊನೆಗೊಳ್ಳುತ್ತದೆ.