ಅರಬೈಲ್ ಘಟ್ಟದಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ.!

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಉರುಳಿಬಿದ್ದ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಟ್ಯಾಂಕರ್ ಉರುಳಿಬಿದ್ದ ಪರಿಣಾಮ ಪೆಟ್ರೋಲ್ ಟ್ಯಾಂಕಿಗೆ ಹಾನಿಯಾಗಿ ಪೆಟ್ರೋಲ್ ಸೋರಿಕೆಯಾಗಿದೆ. ಆದರೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.

ಪೆಟ್ರೋಲ್ ಸೋರಿಕೆ ತಡೆದು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಟ್ಯಾಂಕರ್ ಮೇಲೆತ್ತಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಮಂಗಳೂರಿನಿಂದ ಬೀದರ್ ಕಡೆಗೆ ಪೆಟ್ರೋಲ್ ಕೊಂಡೊಯ್ಯುತಿದ್ದ ಟ್ಯಾಂಕರ್ ಇದಾಗಿದ್ದು ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.