ಬೆಂಗಳೂರು: ರಾಜ್ಯದಲ್ಲಿ PFI ಆಸ್ತಿ ಮುಟ್ಟುಗೋಲು ಹಾಕಿಕೊಳ್ಳೋ ಕೆಲಸ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, PFI ಬ್ಯಾನ್ ನಂತರದ ಪ್ರಕ್ರಿಯೆ ನಡೆಯುತ್ತಿವೆ. ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಧಿಕಾರ ನೀಡಿದೆ. ಆಸ್ತಿ ಮುಟ್ಟುಗೋಲು ಸೇರಿ ಎಲ್ಲ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.
ನಿನ್ನೆ ಬೆಳಗ್ಗೆಯೇ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದ್ದು, ನಾವು ಜಿಲ್ಲಾಧಿಕಾರಿಗಳಿಗೆ ಆದೇಶಗಳನ್ನು ನೀಡಿದ್ದೇವೆ. PFI ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕೆಲಸ ಆಗುತ್ತಿದೆ. ರಾಜ್ಯದಲ್ಲಿ PFI ಆಸ್ತಿ ಎಷ್ಟಿದೆ ಅನ್ನೋದು ಸರ್ವೆ ಆಗುತ್ತಿದ್ದು, ಸರ್ವೆ ಬಳಿಕ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ಧಾರೆ.