ನವದೆಹಲಿ: ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಬೂಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ. ಬೂಮ್ರಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ.