ಬೆಂಗಳೂರು: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಿವಿಯ 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ ಇದ್ದು ವಿವಿ ಹಾಸ್ಟೆಲ್ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಅಂತಿಮ ವರ್ಷದ ಸೆಮಿಸ್ಟರ್ ಮುಗಿಯಲು ಕೇವಲ ಒಂದೂವರೆ ತಿಂಗಳಷ್ಟೇ ಬಾಕಿ ಉಳಿದಿದ್ದರೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಾತ್ರ ವಿದ್ಯಾರ್ಥಿ ವೇತನ ಬಾಕಿ ಉಳಿಸಿಕೊಂಡಿದೆ.
ಈ ನಿಟ್ಟಿನಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಇನ್ನೂ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶೀಘ್ರವೇ ವಿದ್ಯಾರ್ಥಿ ವೇತನ ಬಿಡುಗಡೆಗೆ ವಿದ್ಯಾರ್ಥಿಗಳ ಆಗ್ರಹ ಮಾಡಿದ್ದಾರೆ.