ಕೆಎಸ್​ಆರ್​ಟಿಸಿ ಬಸ್ ಹರಿದು ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಸಾವು

ಬಾಗಲಕೋಟೆ: ಬಾದಾಮಿ ಪಟ್ಟಣದ ಹೊರವಲಯದಲ್ಲಿ ಮಹಿಳೆಯ ಮೇಲೆ ಕೆಎಸ್ಆರ್ ಟಿಸಿ ಬಸ್ ಹರಿದು ಮೃತಪಟ್ಟ ದುರ್ಘಟನೆ ನಡೆದಿದೆ. ಗಂಡ ಹಾಗೂ ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವೆಂಕುಬಾಯಿ ರಾಮಣ್ಣ ಚವ್ಹಾಣ್ (35) ಮೃತ ಮಹಿಳೆ.

ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತಳು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಾಳಾಪುರ ತಾಂಡಾ ನಿವಾಸಿ. ವೆಂಕುಬಾಯಿ ಹಾಗೂ ಕುಟುಂಬ ಬಾದಾಮಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಸ್ ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಬಸ್ ಎಲ್ಲರೂ ಅಪಾಯದಿಂದ ಬಚಾವ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.