ಬಿಹಾರ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಯ ಸಂಚನ್ನು ವಿಫಲಗೊಳಿಸಿದ್ದಾರೆ. ಪಾಟ್ನಾದಲ್ಲಿ ಮೋದಿಯವರನ್ನ ಗುರಿಯಾಗಿಸಿ ಇಬ್ಬರು ಉಗ್ರರು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ. ಇದೀಗ ಬಿಹಾರ ಪೊಲೀಸರು ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಭಯೋತ್ಪಾದಕರು 2047 ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟವನ್ನಾಗಿಸುವ ಸಂಚು ರೂಪಿಸಿದ್ದರು ಎನ್ನಲಾಗಿದೆ. ಉಗ್ರರ ವಿಚಾರಣೆ ವೇಳೆ ಈ ಸ್ಪೋಟಕ ಮಾಹಿತಿ ಹೊರಬಿದ್ದಿದೆ.
ಜುಲೈ 12ರಂದು ಪ್ರಧಾನಿ ಮೋದಿ ಬಿಹಾರಕ್ಕೆ ಭೇಟಿ ನೀಡಿದ್ದ ವೇಳೆ ಅವರ ಹತ್ಯೆಗೆ ಭಯೋತ್ಪಾದಕರು ಸ್ಕೆಚ್ ಹಾಕಿರುವುದು ಬಹಿರಂಗವಾಗಿದೆ. ಬಂಧಿತರನ್ನು ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲುದ್ದೀನ್ ಮತ್ತು ಅಥರ್ ಪರ್ವೇಜ್ ಎಂದು ಪೊಲೀಸರು ಗುರುತಿಸಿದ್ದಾರೆ. ಉಗ್ರರು ಪಿಎಫ್‌ಐ ಜೊತೆ ಸಂಪರ್ಕ ಹೊಂದಿರುವುದು ಕಂಡುಬಂದಿದೆ. ಜೊತೆಗೆ ಉಗ್ರ ಸಂಘಟನೆಗಳಿಂದ ತರಬೇತಿ ಪಡೆದಿದ್ದರು ಎನ್ನಲಾಗಿದೆ. ಸದ್ಯ ಪೊಲೀಸರು ಉಗ್ರರನ್ನು ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.