ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸೆ. 30 ರಂದು ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ್ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಬ್ಬ ನಾಯಕ-ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಳುಹಿಸಿದ್ದಾರೆ. ಅ. 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಶಶಿ ತರೂರ್​, ಮಲ್ಲಿಕಾರ್ಜುನ್​ ಖರ್ಗೆ ಮತ್ತು ಕೆ.ಎನ್ ತ್ರಿಪಾಠಿ ಸ್ಪರ್ಧಿಸಲಿದ್ದಾರೆ.