12 ಜನರಿಗೆ ಕಚ್ಚಿ ಗಾಯಗೊಳಿಸಿದ ಪಿಟ್‌ಬುಲ್ ನಾಯಿ

ಪಂಜಾಬ್: ಪಿಟ್‌ಬುಲ್ ನಾಯಿಯೊಂದು ಗುರುದಾಸ್‌ಪುರದ 12 ಜನರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ದಾಳಿಗೊಳಗಾದವರೆಲ್ಲ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಟ್ಯಾಂಗೋ ಶಾ ಗ್ರಾಮದಿಂದ ಚುಹಾನ್ ಗ್ರಾಮದವರೆಗೆ ಸುಮಾರು 15 ಕಿ.ಮೀ.ನಷ್ಟು ಸಂಚರಿಸಿದ ನಾಯಿ, ದಾರಿಯಲ್ಲಿ ಸಿಕ್ಕಸಿಕ್ಕ ಜನರ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಆತ್ಮರಕ್ಷಣೆಗಾಗಿ ಪಿಟ್‌ಬುಲ್‌ ನಾಯಿಯನ್ನು ಕೊಂದಿದ್ದಾರೆ ಎನ್ನಲಾಗಿದೆ.