ಐದು ಆಟಗಳನ್ನು ಅಧಿಕೃತವಾಗಿ ಗ್ರಾಮೀಣ ಕ್ರೀಡೆಗಳೆಂದು ಘೋಷಣೆ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಐದು ಆಟಗಳನ್ನು ಅಧಿಕೃತವಾಗಿ ಗ್ರಾಮೀಣ ಕ್ರೀಡೆಗಳೆಂದು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಲ್ಲೇಶ್ವರದ ಚಂದ್ರಶೇಖರ್‌ ಆಜಾದ್‌ ಆಟದ ಮೈದಾನದಲ್ಲಿ ಶನಿವಾರ ಪ್ರಧಾನಿ ಮೋದಿ 72 ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ನಮೋ ಕಿಸಾನ್‌ ಕಪ್‌’ಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಕಬಡ್ಡಿ, ಕೊಕ್ಕೊ, ಕುಸ್ತಿ, ಕಂಬಳ ಹಾಗೂ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ಗ್ರಾಮೀಣ ಕ್ರೀಡೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕ್ರೀಡೆಗಳಿಗೆ ಉತ್ತೇಜನ ನೀಡಲು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿಯಿಂದ ಅನುದಾನ ಸಹ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.