ಇಂಡೋನೇಷ್ಯಾ: ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಗಲಭೆಯಲ್ಲಿ ಸುಮಾರು 127 ಮಂದಿ ಸಾವನ್ನಪ್ಪಿರುವ ಘಟನೆ ಕಂಜುರುಹಾನ್ ಸ್ಟೇಡಿಯಂನಲ್ಲಿ ನಡೆದಿದೆ. ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ತಂಡಗಳ ನಡುವಿನ ಪಂದ್ಯದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗುತ್ತಿದ್ದಂತೆ ಜನರನ್ನು ನಿಯಂತ್ರಣ ಮಾಡಲು ಪೊಲೀಸ್ ಅಧಿಕಾರಿಗಳು ಟಿಯರ್ ಗ್ಯಾಸ್ ಫೈರ್ ಮಾಡಿದ್ದರು. ಈ ವೇಳೆ ನಡೆದ ಕಾಲ್ತುಳಿತ ಹಾಗೂ ಉಸಿರುಗಟ್ಟಿ 127 ಜನರು ಸಾವನ್ನಪ್ಪಿದ್ದಾರೆ ಎಂದು ಪೂರ್ವ ಜಾವಾ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಕ್ರೀಡಾಂಗಣದಲ್ಲೇ 34 ಮಂದಿ ಸಾವನ್ನಪ್ಪಿದ್ದು, ಉಳಿದವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 180 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಪರಿಣಾಮ ಬಿಆರ್‌ಐ ಲಿಗಾ 1 ರ ಫುಟ್ಬಾಲ್ ಪಂದ್ಯಗಳನ್ನು ಒಂದು ವಾರ ಸ್ಥಗಿತ ಮಾಡಲಾಗಿದೆ.