ಹಾವೇರಿ: ಪಂಜಾಬ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಮೂಲದ ಯೋಧ ಶಿವರಾಜ್ ಅಪಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ವೀರ ಯೋಧ ಶಿವರಾಜ್ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.