ಉತ್ತರ ಪ್ರದೇಶ: ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯ ಹಿನ್ನೆಲೆಯಲ್ಲಿ ಗುರುಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಬೆಳಿಗ್ಗೆಯಿಂದ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಂದೆ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದ ಅಖಿಲೇಶ್ ಯಾದವ್ ದೆಹಲಿಯಿಂದ ಗುರುಗಾಂವ್ ಆಸ್ಪತ್ರೆಗೆ ತೆರಳಿದ್ದಾರೆ.