ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪೋಸ್ಟ್ ಹಾಕುತ್ತಿದ್ದ ಇಬ್ಬರ ಬಂಧನ.!

ಶಿರಸಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹಾಗೂ ಕೋಮು ಪ್ರಚೋದನೆ ನೀಡುತ್ತಿದ್ದ ಇಬ್ಬರು ಯುವಕರನ್ನು ಸೋಮವಾರ ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಮರಾಠಿ ಕೊಪ್ಪದ ಮಹ್ಮದ್ ಗೌಸ್ (35), ಮೆಹಬೂಬ್ ಸಾಬ್ (27) ಬಂಧಿತರು.

ಅನ್ಯ ಕೋಮಿನ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಹಾಗೂ ಕೋಮು ಪ್ರಚೋದನೆಯ ವಿಷಯಗಳನ್ನು ಶೇರ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ತಾಲೂಕು ದಂಡಾಧಿಕಾರಿ ಎದುರು ಹಾಜುರುಪಡಿಸಿದ್ದಾರೆ.