ಬೆಂಗಳೂರು: ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.