ನಾಡಿನ ಜನತೆಗೆ ‘ದಸರಾ’ ಹಬ್ಬದ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

ಮೈಸೂರು: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ, ಸಿಎಂ ಬೊಮ್ಮಾಯಿ‌ ಅವರು ನಾಡಿನ ಜನತೆಗೆ ದಸರಾ ಶುಭಾಶಯ ತಿಳಿಸಿದ್ದಾರೆ. ‘ಕನ್ನಡ ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಸಕಲ ಮಂಗಳವನ್ನುಂಟು ಮಾಡಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಸಿಎಂ ಬೊಮ್ಮಾಯಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಈ ಬಾರಿ ಅದ್ದೂರಿ, ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಸೇರಿ ದಸರಾ ಹಬ್ಬವನ್ನು ಆಚರಣೆ ಮಾಡಿದ್ದಾರೆ ಎಂದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಯೋಜನಾಬದ್ಧವಾಗಿ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಚರಣೆ ಮಾಡಿದ್ದಾರೆ. ಅವರಿಗೆ ಮತ್ತು ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.