ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವಿಟ್ ಮಾಡಿ CID ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ ಅಧಿವೇಶನದಲ್ಲಿ PSI ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಎಕ್ಸ್ ಸಿಎಂ ಪುತ್ರ ಈ ಹಗರಣದ ಕಿಂಗ್‌ಪಿನ್ ಎಂದು ಯತ್ನಾಳ್ ಹೇಳಿದ್ದಾರೆ. ಜೊತೆಗೆ CBI ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಯತ್ನಾಳ್ ಆರೋಪ ಗಮನಿಸಿದರೆ PSI ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‌ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ.? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ CBI ತನಿಖೆಯಾಗಬೇಕು ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.