ಥೈಲೆಂಡ್: ಈಶಾನ್ಯ ಪ್ರಾಂತ್ಯದಲ್ಲಿ ಮಕ್ಕಳ ಡೇ-ಕೇರ್ ಸೆಂಟರ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಮಕ್ಕಳು ಸೇರಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನೊಂಗ್ ಬುವಾ ಲ್ಯಾಮ್ ಫು ಪ್ರದೇಶದಲ್ಲಿದ್ದ ಸಂಭವಿಸಿದ್ದು, ಬಹುತೇಕ ಮಕ್ಕಳೇ ಸಾವನ್ನಪ್ಪಿದ್ದಾರೆ ಎಂದು ಉಪ ಪೊಲೀಸ್ ವಕ್ತಾರ ಅರ್ಚೊನ್ ಕ್ರೈಟಾಂಗ್ ಮಾಹಿತಿ ನೀಡಿದ್ದಾರೆ. ವರದಿಗಳ ಪ್ರಕಾರ, ಮಾಜಿ ಪೊಲೀಸ್ ಅಧಿಕಾರಿ ಗುಂಡಿನ ದಾಳಿ ನಡೆಸಿದ್ದಾನೆ. 30 ಜನರನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.