ಕಾರವಾರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅ. 11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್ ನಾಯ್ಕ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರವಾರದ ಮೆಡಿಕಲ್ ಕಾಲೇಜಿಗೆ ಆಗಮಿಸಿ 160 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲದೇ, ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಕಲ್ಪಿಸಬೇಕು ಹಾಗೂ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂದು ನಾನು ನಿರಂತರವಾಗಿ ಪ್ರಯತ್ನ ನಡೆಸುತ್ತಿದ್ದೇನೆ. ಈಗ ಸಚಿವರು ಆಗಮಿಸುತ್ತಿರುವುದು ಸಂತಸ ತಂದಿದೆ. ಆರೋಗ್ಯ ಸಚಿವರ ಭೇಟಿಯಿಂದ ಕಾರವಾರ ಹಾಗೂ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ನಾಂದಿ ಆಗಲಿದೆ.
– ರೂಪಾಲಿ ಎಸ್.ನಾಯ್ಕ
ಶಾಸಕರು, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ