ನವದೆಹಲಿ: ದೇಶಾದ್ಯಂತ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ನ. 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪರಸ್ಪರ ಒಮ್ಮತದ ಮೇರೆಗೆ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಲು ಇದರಿಂದ ಅನುಕೂಲವಾಗಲಿದ್ದು, ನ್ಯಾಯಾಲಯಗಳ ಮೇಲಿನ ಒತ್ತಡವೂ ಸಹ ಕಡಿಮೆಯಾಗಲಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ತಮ್ಮ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಲು ಬಯಸುವವರು https://cms.nic.in/ncdrcusersWeb/ ಅಥವಾ ಹೆಲ್ಪ್ ಲೈನ್ ಸಂಖ್ಯೆ 1915 ಕ್ಕೆ ಕರೆ ಮಾಡಬಹುದಾಗಿದೆ.