ಬೆಂಗಳೂರು: ರೈಲ್ವೆ ಇಲಾಖೆಯು ಮೈಸೂರು – ಬೆಂಗಳೂರು ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ರೈಲ್ವೆ ಮಂಡಳಿ ಉಪ ನಿರ್ದೇಶಕ ರಾಜೇಶ್ ಕುಮಾರ್ ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಎಂದು, ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ‘ಕುವೆಂಪು ಎಕ್ಸ್ ಪ್ರೆಸ್’ ಎಂದು ಮರು ನಾಮಕರಣ ಮಾಡಿದ್ದಾರೆ.
ಈ ಕುರಿತು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ ಪ್ರೆಸ್ ನಿಮಗೆ ಸೇವೆ ನೀಡಲಿದೆ. ಇನ್ನೂ ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ ಎಂದು ತಿಳಿಸಿದ್ದಾರೆ.