ದೇಶದಲ್ಲಿ ದಿನೇದಿನೇ ಏರಿಕೆಯಾಗುತ್ತಿದೆ ಕೋವಿಡ್ ಕೇಸ್.!

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ, ಕಳೆದ 24 ಗಂಟೆಗಳ ಕೋವಿಡ್ ಕೇಸ್‌ಗಳ ವಿವರ ಈ ರೀತಿ ಇದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,038 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 47 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೋವಿಡ್‌ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,604 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶ ಬಿಡುಗಡೆಗೊಳಿಸಿದೆ.

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,39,073 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 16,994 ಜನರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಒಟ್ಟು 4,30,45,350 ಜನರು ಚೇತರಿಸಿಕೊಂಡಿದ್ದಾರೆ.

ಪ್ರಸ್ತುತ ಭಾರತದಲ್ಲಿ ಕೋವಿಡ್ ಚೇತರಿಕೆ ದರ ಶೇ.98.48 ರಷ್ಟಿದೆ. ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 199.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.4.44 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.30 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *